Kpscvani

educational ,employment ,health,sports,political news and other information


Monday, February 28, 2022

Haveri district Anganawadi Recruitment 2022

  shekharagouda       Monday, February 28, 2022

🌐 ಹಾವೇರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಕಾರ್ಯಕರ್ತೆ ಹುದ್ದೆಗಳ ಅಧಿಸೂಚನೆ 🌐

👉 ಹಾವೇರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 07 ಶಿಶು ಅಭಿವೃದ್ಧಿಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆ ಮತ್ತು 57 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿಯೋಜನಾ ಅಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಲು ಕೋರಿದೆ.

👉 ವಿಷಯ:- ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ

👉 ಮಾಡಲು ಅರ್ಜಿ ಆಹ್ವಾನಿಸುವ ಬಗ್ಗೆ. 1)ಸರ್ಕಾರಿ ಆದೇಶ ಸಂ.ಮಮಇ/303/ಐಸಿಡಿ/2017/ aಬೆಂಗಳೂರು/


👉 4)ಮಾನ್ಯ ಜಿಲ್ಲಾಧಿಕಾರಿಗಳು, ಹಾವೇರಿ ಇವರ ಅನುಮೋದನೆ ಕಂಡಿಕೆ ಸಂ.106/ದಿನಾಂಕ:03-02-2022,

👉 ಹಾವೇರಿ ಜಿಲ್ಲೆಯ 07 ಶಿಶು ಅಭಿವೃದ್ಧಿಯೋಜನೆ ವ್ಯಾಪ್ತಿಯ ಈ ಕೆಳಗೆ ಕಾಣಿಸಲಾದ ಗ್ರಾಮಗಳ/ನಗರ ಪ್ರದೇಶಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ 13 ಕಾರ್ಯಕರ್ತೆ ಹಾಗೂ 57 ಸಹಾಯಕಿಯರು" ಗೌರವ ಧನ ಸೇವೆ ಸಲ್ಲಿಸಲು ಈ ಕೆಳಗೆ ತೋರಿಸಲಾದ ಮೀಸಲಾತಿ ಹೊಂದಿದ 18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಗ್ರಾಮೀಣ ಪ್ರದೇಶದಲ್ಲಿ ಅದೇ ಕಂದಾಯ ಗ್ರಾಮದ ಹಾಗೂ ನಗರ ಪ್ರದೇಶದ ಕೇಂದ್ರದ ವ್ಯಾಪ್ತಿಯ ಕಂದಾಯ ವಾರ್ಡಿನ ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯಾಗಲು ಎಸ್.ಎಸ್.ಎಲ್.ಸಿ. ತೇರ್ಗಡೆ ಆಗಿರಬೇಕು. ಹೆಚ್ಚಿನ ವಿದ್ಯಾರ್ಹತೆ ಪಡೆದಿದ್ದಲ್ಲಿ ಅರ್ಜಿ ಅರ್ಹರಿರುತ್ತಾರೆ. ಆದರೆ ಆಯ್ಕೆ ಸಮಯದಲ್ಲಿ ಸಲ್ಲಿಸಲು ಅರ್ಹರಿರುತ್ತಾರೆ. ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು.ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು ಗರಿಷ್ಠ ವಿದ್ಯಾರ್ಹತೆ 9ನೇ ತರಗತಿ ತೇರ್ಗಡೆ ಹೊಂದಿರಬೇಕು. 9ನೇ ತರಗತಿ ತೇರ್ಗಡೆ ಹೊಂದಿ ಹೆಚ್ಚಿನ ವಿದ್ಯಾರ್ಹತೆಯನ್ನು ಪಡೆದಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಆದರೆ ಆಯ್ಕೆ ಸಮಯದಲ್ಲಿ 9ನೇ ತರಗತಿಯ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಈ ಕೆಳಗೆ ತೋರಿಸಲಾದ ಎಲ್ಲ ದಾಖಲೆಗಳೊಂದಿಗೆ ಸಂಬಂಧಿತರು ಆನಲೈನ್ ಮೂಲಕ ಅರ್ಜಿಗಳನ್ನು ದಿನಾಂಕ:17-03-2022ರ ಅಪರಾಹ್ನ 5-30 ಗಂಟೆಯೊಳಗೆ ಸಲ್ಲಿಸಲು ಸೂಚಿಸಿದೆ.

👉 -::ಅರ್ಜಿಯೊಂದಿಗೆ ಒದಗಿಸಬೇಕಾದ ದಾಖಲೆಗಳು:

👉 1)ಮಾಹಿತಿಯನ್ನು ಆನಲೈನ್ ಮೂಲಕ ಅರ್ಜಿ ಭರ್ತಿ ಮಾಡುವುದು. 2)ಜನನ ಪ್ರಮಾಣ ಪತ್ರ/ ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, 

👉3)ಕಡ್ಡಾಯವಾಗಿ ತಹಶೀಲದಾರರು/ 
ಉಪತಹಶೀಲದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು, ಬೇರೆ ರಹವಾಸಿ ಪ್ರಮಾಣ ಪತ್ರ ಲಗತ್ತಿಸಿದಲ್ಲಿ ಪರಿಗಣಿಸಲಾಗುವುದಿಲ್ಲ.

👉 4)ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ (ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವವರು 10ನೇ ತರಗತಿಯ ಅಂಕಪಟ್ಟಿಯನ್ನು ಲಗತ್ತಿಸುವುದು) ಎಸ್.ಎಸ್.ಎಲ್.ಸಿ. ಅಂಕಗಳ ಪಡೆದ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

👉 5)ಅಂಗನವಾಡಿ ಸಹಾಯಕಿ ಹುದ್ದೆಗೆ ಆಯ್ಕೆ ಬಯಸುವ ಅಭ್ಯರ್ಥಿಗಳು 4 ರಿಂದ 9ನೇ ಇಯತ್ತೆಯವರೆಗಿನ ಅಂಕ ಪಟ್ಟಿಗಳನ್ನು ಮಾತ್ರವೇ ಸಲ್ಲಿಸಬೇಕು. (ಹೆಚ್ಚಿನ ವಿದ್ಯಾರ್ಹತೆಯುಳ್ಳ ಅಂದರೆ 9ನೇ ತರಗತಿ, 8ನೇ ತರಗತಿ 7ನೇ ತರಗತಿ, 6ನೇ ತರಗತಿ 5ನೇ ತರಗತಿ ಹಾಗೂ 4ನೇ ತರಗತಿ) ಅಭ್ಯರ್ಥಿಗೆ ಆಧ್ಯತೆ ಮೇರೆಗೆ ಆಯ್ಕೆ ಪರಿಗಣಿಸಲಾಗುವುದು. ಎಸ್‌ಎಸ್‌ಎಲ್‌ಸಿ ಮತ್ತು ಹೆಚ್ಚಿನ

ವಿದ್ಯಾರ್ಹತೆಯ ಅಂಕಪಟ್ಟಿಗಳನ್ನು ಲಗತ್ತಿಸಿದಲ್ಲಿ ಪರಿಗಣಿಸುವುದಿಲ್ಲ. 6)ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ (ತಹಶೀದಾರರು ನೀಡಿದ್ದು)

👉 7)ವಿಧವಾ ಅಭ್ಯರ್ಥಿಗಳು ಕಡ್ಡಾಯವಾಗಿ ಪತಿಯ ಮರಣ ಪ್ರಮಾಣ ಪತ್ರ ಲಗತ್ತಿಸುವುದು. (ಯಾವುದೇ ಕಾರಣಕ್ಕೂ ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವುದಿಲ್ಲ)

👉 8)ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿ ಎಂದು ಉಪ ವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ 

👉 9)ಅಂಗವಿಕಲತೆ ಪ್ರಮಾಣ ಪತ್ರವನ್ನು ಪರಿಗಣಿಸಲಾಗುವುದು. (ದೈಹಿಕ ಅಂಗವಿಕಲತೆ ಶೇ.60ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ) (ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ ಮಾತ್ರ) (ಅಂಗವಿಕಲರ ಮಾಶಾಸನದ ದೃಢೀಕರಣವನ್ನು ಪರಿಗಣಿಸುವುದಿಲ್ಲ)

👉 10) ಅಂಗನವಾಡಿ ಕಾರ್ಯಕರ್ತೆ ನೇಮಕಾತಿಯಲ್ಲಿ ವಿಕಲಚೇತನರಿಗೆ 10ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಿದೆ.

👉 11)ವಿಚ್ಚೇಧನ ಹೊಂದಿರುವ ಮಹಿಳೆಯರು ನ್ಯಾಯಾಲಯದಿಂದ ಪಡೆದ ವಿಚ್ಚೇಧನ ಪ್ರಮಾಣ ಪತ್ರವನ್ನು ಲಗತ್ತಿಸುವುದು. 12)ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಲಗತ್ತಿಸುವುದು.

👉 13) ಪರತ್ಯಕ್ಕೆ ಮಹಿಳೆಯರು ಗ್ರಾಮ ಪಂಚಾಯತನಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸುವುದು. 14)ಇಲಾಖೆಯ ಸುಧಾರಣಾ ಸಂಸ್ಥೆ/ರಾಜ್ಯ ಮಹಿಳಾ ನಿಲಯಗಳ ನಿವಾಸಿ ಎಂಬ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

👉 ಇಲಾಖೆಯ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ

👉 15)ಯೋಜನಾ ನಿರಾಶ್ರಿತರೆಂಬ ಬಗ್ಗೆ ತಹಶೀಲದಾರರಿಂದ ಪಡೆದ ಪ್ರಮಾಣ ಪತ್ರ

👉 16)ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಾಗಿದ್ದಲ್ಲಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗೆ ಆಯ್ಕೆಯಾದಲ್ಲಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಿರುತ್ತದೆ.

👉 17)ನಗರ ಪ್ರದೇಶದಲ್ಲಿನ ಅಂಗನವಾಡಿಗಳಿಗೆ ಅರ್ಜಿ ಸಲ್ಲಿಸಿ ಬಯಸುವವರು ಆ ಕೇಂದ್ರದ ವ್ಯಾಪ್ತಿಯಲ್ಲಿನ ವಾರ್ಡಿನ ನಿವಾಸಿಗಳಾಗಿರಬೇಕು, ಬೇರೆ ವಾರ್ಡಿನ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. (ತಹಶೀಲದಾರರಿಂದ ಪಡೆದ ಮೂರು ವರ್ಷದೊಳಗಿನ ಪ್ರಮಾಣ ಪತ್ರ ಲಗತ್ತಿಸುವುದು)

👉 18)ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಕವಂಡುಬಂದಲ್ಲಿ ನೇಮಕಾತಿ ಪ್ರಾಧಿಕಾರ ಚರ್ಚಿಸಿ ನಿಯಮಾನುಸಾರ ಆಯ್ಕೆ ಪ್ರಕ್ರಿಯೆ ಜರುಗಿಸಲಾಗುವುದು. ಆಯ್ಕೆ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ.

ಸಂಪೂರ್ಣ ಮಾಹಿತಿಯ ಫೈಲ್ ನೋಡಲು ಕೆಳಗಿನ ಲಿಂಕ್ ಒತ್ತಿ 👇 👇 👇 👇 👇 👇 👇 👇 👇
              👉       ಈ ಲಿಂಕ್ ಒತ್ತಿ 
logoblog
Previous
« Prev Post

No comments:

Post a Comment